ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಆಯೋಜಿಸಿರುವ 218 ನೇ ಫಲಪುಷ್ಪಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ”ವನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ಸಿಎಂ ಸಿದ್ದರಾಮಯ್ಯ ನಮಿಸಿದರು.
ಈ ವೇಳೆ ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಿದ್ದ "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ"ವನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದೆ.
— Siddaramaiah (@siddaramaiah) August 7, 2025
ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ… pic.twitter.com/52BZx05xNd