HomeKarnatakaBIG NEWS: ಮುಡಾ ನಿವೇಶನ ಹಗರಣ: ಒಂದೆಡೆ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್, ಮತ್ತೊಂದೆಡೆ ಮುಂದುವರೆದ...

BIG NEWS: ಮುಡಾ ನಿವೇಶನ ಹಗರಣ: ಒಂದೆಡೆ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್, ಮತ್ತೊಂದೆಡೆ ಮುಂದುವರೆದ ಇಡಿ ವಿಚಾರಣೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ ಎಂದು ಲೋಕಾಯುಕ್ತ ಪೊಲೀಸರು ಅಂತಿಮ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ. ಮತ್ತೊಂದು ಕಡೆ ಇಡಿ ಅಧಿಕಾರಿಗಳ ವಿಚಾರಣೆ ಮುಂದುವರೆದಿದೆ.

ನಗರ ಯೋಜನಾ ಶಾಖೆಯ ಮುಖ್ಯಸ್ಥ ಶಿವರಾಮಯ್ಯ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ನಗರ ಯೋಜನಾ ಶಾಖೆಯ ಮುಖ್ಯಸ್ಥ ಶಿವರಾಮಯ್ಯ ಅವರಿಗೆ ನೋಟಿಸ್ ನೀಡಲಾಗಿದ್ದು, ಇಂದು ಕಚೇರಿಗೆ ಬಂದು ವಿಚಾರಣೆ ಎದುರಿಸುವಂತೆ ಇಡಿ ಸೂಚನೆ ನೀಡಿದೆ. ಕೆಸರೆ ಗ್ರಾಮದ ಸರ್ವೇ ನಂಬರ್ 464ರ ಭೂಮಿಯ ಸಂಬಂಧ ಅವರನ್ನು ವಿಚಾರಣೆಗೆ ಕರೆಯಲಾಗಿದೆ. ದೇವರಾಜು ಬಳಿ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿಸಿದ್ದರು. ಅದೇ ಭೂಮಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ದಾನವಾಗಿ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular