HomeKarnatakaBREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

BREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದೇವೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕೃಷಿ ಸಚಿವರಾಗಿ, ಗೃಹ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಏನು ನೀಡಿದ್ದಾರೆ? ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಅವರ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. 40 ವರ್ಷದಲ್ಲಿ ಸಣ್ಣ ಕಪ್ಪು ಚುಕ್ಕೆ ಕೂಡ ಇಲ್ಲದ ನನ್ನನ್ನು ಕೇವಲ ಷಡ್ಯಂತ್ರದಿಂದ ಕೆಳಗಿಳಿಸಲು ಪಿತೂರಿ ಮಾಡುತ್ತಿದ್ದಾರೆ. ಇದಕ್ಕೆ ನೀವು ಅವಕಾಶ ನೀಡ್ತೀರಾ? ಬಿಜೆಪಿ ಷಡ್ಯಂತ್ರ ಸೋಲಿಸಬೇಕೆಂದರೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡ್ತಾರೆಂದು ವಿಜಯೇಂದ್ರ, ಆರ್.ಅಶೋಕ, ಯತ್ನಾಳ್ ಎಲ್ಲರೂ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಜ್ಯದ ಜನರ ನೈತಿಕ‌ ಶಕ್ತಿ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ ಪರಿವಾರದ ಷಡ್ಯಂತ್ರಕ್ಕೆ ಹೆದರುವ, ಬೆದರುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ ಎಂದರು.

ವಕ್ಫ್ ಆಸ್ತಿ ಸರ್ಕಾರದ ಆಸ್ತಿ ಅಲ್ಲ. ಅದು ವಕ್ಫ್ ಬೋರ್ಡ್ ಗೆ ಸೇರಿದ ಆಸ್ತಿ. ಈ ಆಸ್ತಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವಧಿಯಲ್ಲೂ ನೋಟಿಸ್ ನೀಡಿದ್ದಾರೆ, ಒತ್ತುವರಿ ತೆರವುಗೊಳಿಸಿದ್ದಾರೆ. ಆದರೆ ನಮ್ಮ‌ ಸರ್ಕಾರದಿಂದ ಯಾವುದೇ ರೈತರಿಗೂ ತೊಂದರೆ ಆಗುವುದಿಲ್ಲ. ನೋಟಿಸ್ ವಾಪಾಸ್ ಪಡೆಯಲು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಅಜ್ಜಂಪೀರ್ ಖಾದ್ರಿ ಅವರಿಗೆ ಒಳ್ಳೆ ಸ್ಥಾನ ಕೊಡುತ್ತೇವೆ. ಶಿಗ್ಗಾಂವ್ ನಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular