HomeAgricultureರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ತ್ರಿಫೇಸ್ ವಿದ್ಯುತ್: ಸಿಎಂ ಆದೇಶ

ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ತ್ರಿಫೇಸ್ ವಿದ್ಯುತ್: ಸಿಎಂ ಆದೇಶ

 ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ಫೇಸ್ ವಿದ್ಯುತ್ ಸರಬರಾಜು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಭಾರಿ ಹೆಚ್ಚಾಗಿದೆ. ರೈತರ ಕೃಷಿ ಪಂಪ್ಸೆಟ್ ಗಳಿಗೆ ಪ್ರತಿದಿನ ಐದು ಗಂಟೆ ತಡೆರಹಿತವಾಗಿ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡುವಂತೆ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಲಭ್ಯವಿರುವ ವಿದ್ಯುತ್ ಸಮರ್ಪಕವಾಗಿ ಹಂಚಿಕೆಯಾಗಬೇಕು. ಈ ನಿಟ್ಟಿನಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular