ಬೆಳಗಾವಿ : ಅಗಲಿದ ಕಾಂಗ್ರೆಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಸಂತಾಪ ಸೂಚಿಸಿದರು.
ಮಾಜಿ ಶಾಸಕ ಆರ್.ವಿ. ದೇವರಾಜ್
ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್ ಅವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದರು. ಉತ್ತಮ ಸಂಘಟಕರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರು 1989ರ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ್ತು 1999 ಹಾಗೂ 2013ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಿಂದ 2010ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿಗೆ ಹೋಗಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜ್ ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದರು.
ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್
ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದವರು. ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1999ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 11ನೇ ವಿಧಾನಸಭೆಗೆ ಚುನಾಯಿತರಾಗಿದ್ದರು. ಕ್ಷೇತ್ರದ ಜನರ ಹಾಗೂ ರೈತರ ಪರವಾಗಿ ಸದಾ ಶ್ರಮಿಸುತ್ತಿದ್ದರು. ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ಒಬ್ಬ ಮುತ್ಸದ್ದಿ ಹಾಗೂ ರೈತರ ಪರ ನಾಯಕನನ್ನು ಕಳೆದುಕೊಂಡಂತಾಗಿದೆ.
ಹೆಚ್.ವೈ.ಮೇಟಿ
ಮಾಜಿ ಸಚಿವರು, ಹಾಲಿ ಶಾಸಕರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರು ದೀರ್ಘ ಕಾಲ ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು, ಸಜ್ಜನ ರಾಜಕಾರಣಿ. ರಾಜಕೀಯ ತತ್ವಗಳನ್ನು ತಪ್ಪದೇ ಪಾಲಿಸುತ್ತಿದ್ದ ಅವರು ಜನರೊಂದಿಗೆ ಬೆರೆಯುವ ಗುಣವಿದ್ದು, ಜಾತ್ಯಾತೀತ ತತ್ವದ ಪಾಲಕರಾಗಿದ್ದರು. ಅವರು ಎಲ್ಲ ಜಾತಿ-ಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು.
ಮಾಜಿ ಸಚಿವರು, ಹಾಲಿ ಶಾಸಕರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರು ದೀರ್ಘ ಕಾಲ ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು.
— Siddaramaiah (@siddaramaiah) December 8, 2025
ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ… pic.twitter.com/KAtSpPXI9F
ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್ ಅವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದರು. ಉತ್ತಮ ಸಂಘಟಕರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
— Siddaramaiah (@siddaramaiah) December 8, 2025
ಅವರು 1989ರ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ್ತು 1999 ಹಾಗೂ 2013ರಲ್ಲಿ ಚಾಮರಾಜಪೇಟೆ… pic.twitter.com/7XYNoZru0e
