HomeKarnatakaಜಾಲತಾಣದಲ್ಲಿ ತಿಥಿ ಕಾರ್ಡ್ ರಚಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವಹೇಳನ: ದೂರು

ಜಾಲತಾಣದಲ್ಲಿ ತಿಥಿ ಕಾರ್ಡ್ ರಚಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವಹೇಳನ: ದೂರು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಿಥಿ ಕಾರ್ಡ್ ರಚಿಸಿ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು ನೀಡಲಾಗಿದೆ.

ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್ಬುಕ್ ಖಾತೆಯಲ್ಲಿ ಪ್ರಜ್ವಲ್ ಎಂಬಾತ ಸಿಎಂ ತಿಥಿ ಕಾರ್ಡ್ ರಚಿಸಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯನವರ ತಿಥಿ ಕಾರ್ಡ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಜಾಲತಾಣಗಳಲ್ಲಿ ಶೇರ್ ಮಾಡಲಾಗಿದೆ. ಮೂಡಿಗೆರೆಯ ಪ್ರಜ್ವಲ್ ಈ ರೀತಿ ಪೋಸ್ಟ್ ಹಾಕಿದ್ದು, ಸಿದ್ದರಾಮಯ್ಯ ಅಭಿಮಾನಿ ಬಳಗ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಜ್ವಲ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular