HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ಇಂದು ಕುಟುಂಬದ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು,...

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ಇಂದು ಕುಟುಂಬದ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು, ತನಿಖೆ ಆರಂಭ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.

ಮುಡಾ ಹಗರಣ ತನಿಖೆಗೆ ಅರ್ಹ ಎಂದು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶಿಸಿತ್ತು. ಗುರುವಾರ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದ್ದು, ಶುಕ್ರವಾರವೇ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಖಾಸಗಿ ದೂರಿನಲ್ಲಿ ಉಲ್ಲೇಖಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜ್ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ತನಿಖೆ ಹಂತದಲ್ಲಿ ಕಂಡು ಬರುವ ಸರ್ಕಾರಿ ಅಧಿಕಾರಿಗಳು ಮತ್ತು ಇತರರ ಹೆಸರನ್ನು ಸೇರಿಸುವ ಅಧಿಕಾರ ತನಿಖಾಧಿಕಾರಿಗಳಿಗೆ ಇರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಉದೇಶ್ ಗುರುವಾರ ಬೆಂಗಳೂರಿಗೆ ಆಗಮಿಸಿ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರತಿಗಳನ್ನು ಅಧಿಕೃತವಾಗಿ ಪಡೆದುಕೊಂಡು ಲೋಕಾಯುಕ್ತ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ, ಲೋಕಾಯುಕ್ತ ಕಾನೂನು ಸಲಹೆಗಾರರ ಜೊತೆಗೂ ಸಮಲೋಚನೆ ನಡೆಸಿದ್ದು, ಶುಕ್ರವಾರ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular