ಬೆಂಗಳೂರು: ನೇಕಾರರ ವಿಶೇಷ ಯೋಜನೆ ಅಡಿಯ 20 ಹೆಚ್.ಪಿ.ವರೆಗಿನ ಸಾಮರ್ಥ್ಯದ ವಿದ್ಯುತ್ ಮಗ್ಗದ ಘಟಕಗಳಿಗೆ ಪ್ರತಿ ಯೂನಿಟ್ ಗೆ 1.25 ರೂ. ರಿಯಾಯಿತಿ ತರದ ವಿದ್ಯುತ್ ಮುಂದುವರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗ ಸಲ್ಲಿಸಿದ ಬೇಡಿಕೆಗಳಿಗೆ ಸ್ಪಂದಿಸಿದ ಸಿಎಂ ಭರವಸೆ ನೀಡಿದ್ದಾರೆ.
ನೇಕಾರರಿಗೆ 250 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ಆಯವ್ಯಯದಲ್ಲಿ ಘೋಷಿಸಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ 2ಎ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಿದ್ದು, ನೇಕಾರರು ಸದ್ಬಳಕೆ ಮಾಡಿಕೊಳ್ಳುವಂತೆ ಸಿಎಂ ತಿಳಿಸಿದ್ದಾರೆ.
ನೇಕಾರ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಶ್ರೀ ಘನಲಿಂಗ ಸ್ವಾಮೀಜಿ,… pic.twitter.com/WKjFOshB0q— CM of Karnataka (@CMofKarnataka) July 24, 2023

