HomeKarnataka504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳುರು : 504 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲಿ ಖಾಲಿ ಇರುವ 656 ಕೆಎಎಸ್‌ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಅದರಲ್ಲಿ 504 ಹುದ್ದೆಗಳ ನೇಮಕಾತಿಗೆ ಸಮ್ಮತಿ ಸಿಕ್ಕಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಕಾಂಕ್ಷಿಗಳು ನೇಮಕಾತಿ ನಡೆಸುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಎಲ್ಲಾ 504 ಹುದ್ದೆಗಳ ನೇಮಕಾತಿ ನಡೆಸುವಂತೆ ಆರ್‌ ಡಿಪಿಆರ್‌ ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲಿ ಕೆಎಎಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular