HomeLatest Newsಒಪಿಎಸ್, ಆರೋಗ್ಯ ಸಂಜೀವಿನಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಒಪಿಎಸ್, ಆರೋಗ್ಯ ಸಂಜೀವಿನಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಮೈಸೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರಗೆ ಬರತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘವು ಮೈಸೂರಿನಲ್ಲಿ ಇಂದು ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ, ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳೋಣ. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ. ಶಿಕ್ಷಕರಾದವರು ಮಕ್ಕಳಲ್ಲಿ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ.

ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಪದಾಧಿಕಾರಿಗಳು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular