GOOD NEWS : ಉದ್ಯೋಗಾಂಕ್ಷಿಗಳಿಗೆ ‘CM ಸಿದ್ದರಾಮಯ್ಯ’ ಗುಡ್ ನ್ಯೂಸ್ : ಶೀಘ್ರವೇ ‘KPCL’ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಕೆಪಿಸಿಎಲ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ. ಕೆಪಿಸಿಎಲ್ ಅಧ್ಯಕ್ಷನಾಗಿ ನಾನೂ ಕೂಡ ಕೆಪಿಸಿಎಲ್ ನೌಕರರಲ್ಲಿ ಒಬ್ಬನಾಗಿದ್ದೀನಿ. ಅತೀ ಹೆಚ್ಚು ಕಾಲ ಕೆಪಿಸಿಎಲ್ ಅಧ್ಯಕ್ಷನಾಗಿ ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿಯಾಗಿದ್ದೇನೆ. ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕೆಪಿಸಿಎಲ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡದವರು ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ನಮ್ಮ ಮೇಲೆ, ಅಧಿಕಾರಿಗಳ ಮೇಲೆ ಸಮಾಜದ ಋಣ ಇದೆ. ನಾವಾಗಲೀ, ಅಧಿಕಾರಿಗಳಾಗಲೀ ಸಮಾಜದ ಹಣದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಸಮಾಜದ ಋಣ ತೀರಿಸುವ ಕಾಳಜಿಯಿಂದ ಕೆಲಸ ಮಾಡಬೇಕಿದೆ.

ನಾನು ಓದುವಾಗ ಊರಲ್ಲಿ ಕರೆಂಟ್ ಇರಲಿಲ್ಲ. ಸೀಮೆಎಣ್ಣೆ ದೀಪದಲ್ಲಿ ಓದಿ ಮೇಲೆ ಬಂದೆವು. ನಾನು 8ನೇ ತರಗತಿಗೆ ಬಂದಾಗ ಊರಿಗೆ ಕರೆಂಟ್ ಬಂತು. ಈಗ ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣವನ್ನು ರೈತರ ಪರವಾಗಿ ಸರ್ಕಾರ ಕೊಡುತ್ತಿದೆ. ಕೆಪಿಸಿಎಲ್ ನೌಕರರ ಶ್ರಮದಿಂದ ವಿದ್ಯುತ್ ರೈತರಿಗೆ ತಲುಪುತ್ತಿದೆ. ಪವನ, ಸೌರ, ಉಷ್ಣ, ಜಲ ವಿದ್ಯುತ್ ಉತ್ಪಾದನೆ ಜೊತೆಗೆ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದನೆ ಮಾಡುತ್ತಾ ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದ್ದು ಸ್ವಾವಲಂಬನೆ ಸಾಧಿಸಿದ್ದೀವಿ. 60 ಸಾವಿರ ಮೆ.ವ್ಯಾ ಉತ್ಪಾದನೆ ಮಾಡುವ ಗುರಿ ಎಡೆಗೆ ನಾವು ಸಾಗುತ್ತಿದ್ದೇವೆ. ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎನ್ನುವ ವರದಿಗಳು ಬಂದಿವೆ. ಈ ಸಾಧನೆ ನಾವು ಮಾಡಿದ್ದೇವೆ. ಕೆಪಿಸಿಎಲ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read