HomeAgricultureBIG NEWS: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ಕ್ಕೆ 1,33,867 ಎಕರೆ ಜಮೀನು ಸ್ವಾಧೀನ: ಸಿಎಂ...

BIG NEWS: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ಕ್ಕೆ 1,33,867 ಎಕರೆ ಜಮೀನು ಸ್ವಾಧೀನ: ಸಿಎಂ ಮಾಹಿತಿ

ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಅವರು ಮಾತನಾಡಿ, ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ ಎಂದು ತಿಳಿಸಿದ್ದಾರೆ.

ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. 2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ  ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದಂತೆ ನಿರ್ಣಯಕ್ಕೆ ಬರಲಾಗುವುದು. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular