BREAKING NEWS: ರಾಜ್ಯಪಾಲರ ಭೇಟಿಗೆ ಮುಂದಾದ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಗೆ ಮುಂದಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮದ ಹಗರಣ, ಮುಡಾ ಅಕ್ರಮ ಹಾಗೂ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read