ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಹೊಸಪೇಟೆ: ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ ಕೆಡಿಪಿ ಸಭೆಯಲ್ಲಿ ಶುಕ್ರವಾರ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಮಂಗಳಮುಖಿಯರನ್ನು ಶಕ್ತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಿಸಬೇಕು ಮತ್ತು ಈ ಯೋಜನೆಗಳು ಮುಂದುವರೆಸಬೇಕು ಎಂದು ಪ್ರಸ್ತಾಪಿಸಿದ್ದಾರೆ.

ಇದಕ್ಕೆ ಉತ್ತರ ನೀಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಬದಲಾವಣೆಯಾದರೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ. ಯಾರೇ ಮುಖ್ಯಮಂತ್ರಿ ಆದರೆ ಯೋಜನೆಗಳು ನಿಲ್ಲುವುದಿಲ್ಲ. ಈ ಬಗ್ಗೆ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ. ಯಾವುದೇ ಕಾರಣಕ್ಕೂ ಯೋಜನೆಗಳು ನಿಲ್ಲುವುದಿಲ್ಲ ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read