HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

BIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಈ ಮೊದಲೇ ನಿಗದಿಯಾಗಿದ್ದಂತೆ ದೂರುದಾರರ ವಾದಕ್ಕೆ ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಉತ್ತರ ನೀಡಲಿದ್ದಾರೆ.

ಬಹುತೇಕ ಎಲ್ಲರ ವಾದ ಪ್ರತಿವಾದ ಮುಕ್ತಾಯವಾಗಿದ್ದು, ಅಭಿಷೇಕ್ ಸಿಂಘ್ವಿ ಅವರ ಉತ್ತರದ ಬಳಿಕ ನ್ಯಾಯಾಲಯ ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆಧರಿಸಿ ಸಿಎಂ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆಯಾಗಿದ್ದು, ತೀರ್ಪು ನೀಡುವವರೆಗೆ ಆದೇಶ ಮುಂದುವರೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular