HomeKarnatakaಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮುಗಲಭೆ ಹೆಚ್ಚಳ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮುಗಲಭೆ ಹೆಚ್ಚಳ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ  ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಳವಾಗುತ್ತದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಬಿಜೆಪಿ ಅವರು ಆರೋಪ ಮಾಡೋದು ಬಿಟ್ಟು, ಬೇರೆ ಏನು ಕೆಲಸ ಇದೆ. ಆರೋಪ ಮಾಡುವುದೇ ಅವರ ಕೆಲಸ, ಅರೋಪ ಮಾಡುತ್ತಿರುವುದೆಲ್ಲವೂ ಸುಳ್ಳು.  ಕೋಮುಗಲಭೆ ಎಲ್ಲಿ ನಡೆದಿದೆ ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ನಗರದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಾನೂನಡಿ ಪೊಲೀಸರು ಕ್ರಮ ಕೈಗೊಳ್ಳಲಾಗುತ್ತದೆ. ನಾವು ಕೋಮುಗಲಭೆಗೆ ತಕ್ಷಣ  ಕ್ರಮ ಕೈಗೊಂಡಿದ್ದೇವೆ. ಯಾರೇ ಕೋಮುಗಲಭೆ ಮಾಡಿದ್ರೆ ಅವರ ವಿರುದ್ಧ ಕಠಿಣ ಕ್ರಮ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಅಡ್ಡಿ ಮಾಡುವುದಿಲ್ಲ. ಯಾವುದೇ ಪ್ರತಿಭಟನೆ ಶಾಂತಿಯುತವಾಗಿರಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular