HomeKarnatakaAsian Games 2023 : ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ...

Asian Games 2023 : ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು : ಚೀನಾದ ಹಾಂಗ್ ಝೋ ನಲ್ಲಿ ಇತ್ತೀಚೆಗೆ ನಡೆದ 19 ನೇ ಏಷ್ಯಾಡ್ ಕ್ರೀಡಾ ಕೂಟದಲ್ಲಿ 107 ಪದಕ ಗಳಿಸಿ ಕೀರ್ತಿ ಪತಾಕೆ ಹಾರಿಸಿದ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದ ಸನ್ಮಾನ ಮಾಡಲಾಯಿತು.

ಹೌದು. ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ ರಾಜ್ಯದ ಒಟ್ಟು 8 ಕ್ರೀಡಾಪಟುಗಳು ಪದಕ ಪಡೆದಿದ್ದರು. ಕ್ರೀಡಾಪಟುಗಳಿಗೆ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ಮಾಡಿದರು . ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ತರಬೇತಿದಾರರಿಗೆ ರಾಜ್ಯ ಸರ್ಕಾರ ನಗದು ಪುರಸ್ಕಾರ ನೀಡಿ ಗೌರವಿಸಿದೆ.

ಏಷಿಯನ್ ಗೇಮ್ಸ್ ನಲ್ಲಿ ರಾಜ್ಯದ ಒಟ್ಟು 8 ಕ್ರೀಡಾಪಟುಗಳು ಪದಕ ಪಡೆದಿದ್ದರು. ರಾಜ್ಯದ 4 ಕ್ರೀಡಾಪಟುಗಳು ಚಿನ್ನ ಪಡೆದಿದ್ದರೆ, 4 ಕ್ರೀಡಾಪಟು ಬೆಳ್ಳಿ ಪದಕ ಪಡೆದಿದ್ದರು. ಭಾರತ ಈ ಬಾರಿ ಏಷ್ಯನ್ ಗೇಮ್ಸ್ ನಲ್ಲಿ ಒಟ್ಟು 107 ಪದಕ ಮುಡಿಗೇರಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular