HomeKarnatakaಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಹೇಳಿದ್ದಾರೆ.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಅಸಮಾನತೆ ಇದ್ದು, ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular