ವಸತಿ ರಹಿತರಿಗೆ ಗುಡ್ ನ್ಯೂಸ್: ಇಂದು 36,789 ಮನೆಗಳ ಹಂಚಿಕೆಗೆ ಸಿಎಂ ಚಾಲನೆ

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡ 36,789 ಮನೆಗಳ ಲೋಕಾರ್ಪಣೆ, ಮನೆ ಹಂಚಿಕೆ, ಹಕ್ಕುಪತ್ರ ವಿತರಣಾ ಸಮಾರಂಭ ಇಂದು ನಡೆಯಲಿದೆ.

ಬೆಂಗಳೂರು ಕೆಆರ್ ಪುರಂ ನಗರೇಶ್ವರ ನಾಗೇನಹಳ್ಳಿಯಲ್ಲಿ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಮೂಲಕ ವಸತಿ ರಹಿತರ ಕನಸಿಗೆ ಸರ್ಕಾರ ಸೂರಿನ ಅವಕಾಶ ಕಲ್ಪಿಸಿದೆ.

ಸಮಾರಂಭದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಎ. ನಾರಾಯಣಸ್ವಾಮಿ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಉಪ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read