BIG NEWS: ಗೋ ಶಾಲೆಗಳ ಬಲವರ್ಧನೆ ಸೇರಿ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳಿವು

209 ಕೋಟಿ ರೂ. ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.

ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣವನ್ನು 84.57 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಒಪ್ಪಿಗೆ.

ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಶೇ.15 ರಷ್ಟು ಪರಿಷ್ಕರಣೆ

10.50 ಕೋಟಿ ರೂ. ವೆಚ್ಚದಲ್ಲಿ ಪ್ರಸ್ತುತಕಾರ್ಯನಿರ್ವಹಿಸುತ್ತಿರುವ ಗೋಶಾಲೆಗಳ ಬಲವರ್ಧನೆಗೆ ತೀರ್ಮಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವಡಗನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಕಟ್ಟಡ ಕಾಮಗಾರಿಯನ್ನು ₹149.75 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

56.92 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಸತಿ ನಿಲಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಆಡಳಿತಾತ್ಮಕ ಅನುಮೋದನೆ.

100 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ 200 ಪಶು ವೈದ್ಯಕೀಯ ಸಂಸ್ಥೆಗಳಿಗೆ ನೂತನ ಕಟ್ಟಡಗಳ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read