BREAKING : ಬೆಂಗಳೂರಲ್ಲಿ ಮತ್ತೊಂದು ರಾಮ ಮಂದಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದು, ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ “ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ” ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ನಡೆದ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ ಮತ್ತು ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು.

ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,. ನಾವು ಗಾಂಧಿಜಿಯವರ ರಾಮನನ್ನು ಪೂಜಿಸುತ್ತೇವೆ. ಬಿಜೆಪಿಯ ರಾಮನನ್ನು ಪೂಜಿಸಲ್ಲ. ಗಾಂಧಿಜಿ ಪ್ರಾಣ ಬಿಡುವಾಗಲೂ ಹೇ ರಾಮ್ ಎಂದು ಪ್ರಾಣ ಬಿಟ್ಟರು ಎಂದರು. ರಾಜ್ಯದಲ್ಲಿ ಬಹಳಷ್ಟು ರಾಮನ ದೇವಾಲಯ ಇದೆ. ನಾನು ರಾಮನ ದೇವಸ್ಥಾನ ಕಟ್ಟಿಸಿದ್ದೇನೆ. ನಾನು ಅಯೋಧ್ಯೆಗೇ ಹೋಗುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read