ಚಿಕ್ಕೋಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಥಣಿ ಪಟ್ಟಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿ ಅಥಣಿಯಲ್ಲಿ ‘ಬಸವೇಶ್ವರ ಪ್ರತಿಮೆ’ ಲೋಕಾರ್ಪಣೆ ಮಾಡಿದರು. ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಸಿಎಂಗೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ ಮತ್ತಿತರರು ಸಾಥ್ ನೀಡಿದರು. ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಬಂದ ಮೇಲೆ ನಮ್ಮ ಪಕ್ಷಕ್ಕೆ ಶಕ್ತಿ ಬಂದಿದೆ, ಲಕ್ಷ್ಮಣ ಸವದಿಯಿಂದ ಕೆಲವು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಹಾಗಾಗಿ ಅವರಿಗೆ ಕಾಂಗ್ರೆಸ್ ಪರವಾಗಿ ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.