BIG NEWS : ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿದ್ದ ‘ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿ’ಗೆ ಮುಖ್ಯಮಂತ್ರಿ ಅವರು ಚಾಲನೆ ನೀಡಿ, ಶುಭ ಹಾರೈಸಿದರು.

ಇದಕ್ಕೂ ಮುನ್ನ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜಯಂತಿ ಹಾಗೂ ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಗಾಂಧಿಯವರ ಭಾವಚಿತ್ರಕ್ಕೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಯ ಬಳಿ ಶಾಸ್ತ್ರಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

https://twitter.com/KarnatakaVarthe/status/1841384710968156359

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read