ಕೊಪ್ಪಳ : ಕೊಪ್ಪಳದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ತಿಂಡಿ ತಿನಿಸುಗಳ ರುಚಿ ಸವಿದಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೊಪ್ಪಳದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಬಳಕೆ ಅರ್ಪಿಸಿ, ಬಗೆಬಗೆಯ ತಿಂಡಿ ತಿನಿಸುಗಳನ್ನು ಸೇವಿಸಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಬಡವರು, ವಾಹನ ಚಾಲಕರು, ರೋಗಿಗಳು, ಕೂಲಿ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ನಾನು ಜಾರಿಗೆ ಕೊಟ್ಟ ಇಂದಿರಾ ಕ್ಯಾಂಟೀನ್ ಯೋಜನೆ ಈ ವರೆಗೆ ಕೋಟ್ಯಂತರ ಜನರ ಹಸಿವು ನೀಗಿಸಿದೆ ಎಂಬುದೇ ನನಗೆ ಹೆಮ್ಮೆಯ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೊಪ್ಪಳದಲ್ಲಿ ಇಂದು ನೂತನ ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಬಳಕೆ ಅರ್ಪಿಸಿ, ಬಗೆಬಗೆಯ ತಿಂಡಿ ತಿನಿಸುಗಳನ್ನು ಸೇವಿಸಿದೆ.
— Siddaramaiah (@siddaramaiah) October 6, 2025
ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಬಡವರು, ವಾಹನ ಚಾಲಕರು, ರೋಗಿಗಳು, ಕೂಲಿ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ನಾನು ಜಾರಿಗೆ ಕೊಟ್ಟ ಇಂದಿರಾ ಕ್ಯಾಂಟೀನ್ ಯೋಜನೆ ಈ… pic.twitter.com/bt0tmdVTI5