HomeLatest NewsBREAKING : ಕೊಪ್ಪಳದಲ್ಲಿ ನೂತನ 'ಇಂದಿರಾ ಕ್ಯಾಂಟೀನ್' ಉದ್ಘಾಟಿಸಿ ತಿಂಡಿ -ತಿನಿಸುಗಳ ರುಚಿ ಸವಿದ CM...

BREAKING : ಕೊಪ್ಪಳದಲ್ಲಿ ನೂತನ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿ ತಿಂಡಿ -ತಿನಿಸುಗಳ ರುಚಿ ಸವಿದ CM ಸಿದ್ದರಾಮಯ್ಯ

ಕೊಪ್ಪಳ : ಕೊಪ್ಪಳದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ತಿಂಡಿ ತಿನಿಸುಗಳ ರುಚಿ ಸವಿದಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೊಪ್ಪಳದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಬಳಕೆ ಅರ್ಪಿಸಿ, ಬಗೆಬಗೆಯ ತಿಂಡಿ ತಿನಿಸುಗಳನ್ನು ಸೇವಿಸಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಬಡವರು, ವಾಹನ ಚಾಲಕರು, ರೋಗಿಗಳು, ಕೂಲಿ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ನಾನು ಜಾರಿಗೆ ಕೊಟ್ಟ ಇಂದಿರಾ ಕ್ಯಾಂಟೀನ್ ಯೋಜನೆ ಈ ವರೆಗೆ ಕೋಟ್ಯಂತರ ಜನರ ಹಸಿವು ನೀಗಿಸಿದೆ ಎಂಬುದೇ ನನಗೆ ಹೆಮ್ಮೆಯ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular