ಬೆಂಗಳೂರು : ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಅವರು ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಮಕ್ಕಳಿಗೆ ಶುಭ ಕೋರಿದರು.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ, ನೂರಾರು ಕನಸುಗಳನ್ನು ಹೊತ್ತು ಶಾಲೆಗಳತ್ತ ಹೆಜ್ಜೆಹಾಕುತ್ತಿರುವ ನಾಡಿನ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದರು.
ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭವಾಗಿದ್ದು, ಮಕ್ಕಳ ರಜೆಯ ಮಜದಿಂದ ಹೊರಬಂದು ಶಾಲೆಯತ್ತ ಮುಖ ಮಾಡಿದ್ದಾರೆ.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ, ನೂರಾರು ಕನಸುಗಳನ್ನು ಹೊತ್ತು ಶಾಲೆಗಳತ್ತ ಹೆಜ್ಜೆಹಾಕುತ್ತಿರುವ ನಾಡಿನ ಮಕ್ಕಳಿಗೆ ಶುಭ ಕೋರಿದೆ. pic.twitter.com/cltjQvfvyP
— Siddaramaiah (@siddaramaiah) May 29, 2025