HomeLatest NewsBREAKING: ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

BREAKING: ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಫಲಾನುಭವಿಗಳಿಗೆ ಮನೆ ಹಂಚಿಕೆ ಕಾರ್ಯಕ್ರಮದ ವೇದಿಕೆ ಬಳಿ ಬೃಹತ್ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದ್ದಾರೆ.

ಕಟೌಟ್ ಬಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದಿನ ಸಮಾರಂಭದ ಕಟೌಟ್ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದು, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾಗಿ ಸಿಎಂ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್, ಸಂತೋಷ್ ಲಾಡ್ ಇತರರು ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular