BREAKING : ರಾಜ್ಯದಲ್ಲಿ ‘ಕೊರೊನಾ’ ಭೀತಿ : ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯದಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಆರೋಗ್ಯ ಸಚಿವರಿಗೆ ಕೊರೊನಾ ಹರಡದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಯ್ಯಪ್ಪ ಮಾಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕೇರಳದ ಶಬರಿಮಲೆಗೆ ವಿವಿಧ ರಾಜ್ಯಗಳಿಂದ, ವಿಶೇಷವಾಗಿ ಕರ್ನಾಟಕದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹೋಗುವದರಿಂದ ಕೊರೊನಾ ಸೋಂಕು ಹರಡುವ ಭೀತಿ ಸೃಷ್ಟಿಯಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read