ಹೊಸ ಅನಧಿಕೃತ ಬಡಾವಣೆಗಳ ಮನೆ, ನಿವೇಶನಗಳಿಗೆ ಯಾವುದೇ ‘ಖಾತಾ’ ನೀಡದಂತೆ ಸಿಎಂ ಸೂಚನೆ

ಬೆಂಗಳೂರು: ಅನಧಿಕೃತ ನಿವೇಶನ, ಮನೆಗಳಿಗೆ ಬಿ ಖಾತಾ ನೀಡುವ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ನಿಗದಿತ ಸಮಯದೊಳಗೆ ಅನಧಿಕೃತ ಮನೆ, ನಿವೇಶನಗಳಿಗೆ ಬಿ ಖಾತಾ ನೀಡಬೇಕು. ಹೊಸದಾಗಿ ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡರೆ ಯಾವುದೇ ಖಾತಾ ನೀಡಬಾರದು ಎಂದು ಹೇಳಿದ್ದಾರೆ.

ಮ್ಯುಟೇಷನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಕಿರುಕುಳ ಮತ್ತು ವಿಳಂಬವಾಗದಂತೆ ಎಚ್ಚರ ವಹಿಸಬೇಕು. ಭೂ ಪರಿವರ್ತನೆ ಪ್ರಕ್ರಿಯೆಯನ್ನು ತಿಂಗಳೊಳಗೆ ಪೂರ್ಣಗೊಳಿಸಬೇಕು. ಸಮಗ್ರ ನೀಲ ನಕ್ಷೆ ಆದ ಬಳಿಕ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಈ ಬಗ್ಗೆ ಆದೇಶ ಹೊರಡಿಸಬೇಕು ಎಂದು ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read