HomeKarnatakaವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

‘21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular