HomeKarnatakaಗೃಹಲಕ್ಷ್ಮಿ ಹಣ ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸೂಚನೆ

ಗೃಹಲಕ್ಷ್ಮಿ ಹಣ ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುವ ಗೃಹಲಕ್ಷ್ಮಿ ಸಹಾಯಧನ ಹಣವನ್ನು ಖಾಸಗಿ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲ ಬಾಕಿಗೆ ಬಲವಂತವಾಗಿ ಕಡಿತ ಮಾಡುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮತ್ತು ಶಾಸಕ ದಿನೇಶ್ ಗೂಳಿಗೌಡ ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದ್ದಾರೆ.

ಜತೆಗೆ ಮುಖ್ಯಮಂತ್ರಿ ಕಾರ್ಯದರ್ಶಿ ಅವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳಿಗೆ ತುರ್ತು ಕ್ರಮಕ್ಕೆ ನಿರ್ದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಶಕ್ತಿಯಾಗಿದೆ. ಪ್ರತಿ ತಿಂಗಳು 2000 ರೂ. ಸಹಾಯಧನ ಪಾವತಿಸಲಾಗುತ್ತಿದೆ. ಇತ್ತೀಚೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣವನ್ನು ಖಾಸಗಿ ಫೈನಾನ್ಸ್ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು ಸಾಲದ ಬಾಕಿ ಅಥವಾ ಬಡ್ಡಿ ಎಂದು ಬಲವಂತವಾಗಿ ಕಡಿತಗೊಳಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕೆಂದು ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular