ಬೆಂಗಳೂರು : ಪೊಲೀಸ್ ಗೌರವಗಳೊಂದಿಗೆ ಮಂಜುನಾಥ್ ರಾವ್ , ಭರತ್ ಭೂಷಣ್ ಅಂತ್ಯಕ್ರಿಯೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
ಭಯೋತ್ಪಾದಕ ದಾಳಿಯಂತಹ ಹೀನ ಕೃತ್ಯದಲ್ಲಿ ಅಮಾಯಕ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಈ ದಾಳಿಯಲ್ಲಿ ಮಡಿದ ಕನ್ನಡಿಗರ ಅಂತ್ಯಸಂಸ್ಕಾರವನ್ನು ಗೌರವದಿಂದ ನೆರವೇರಿಸಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯವೆಂದು ಭಾವಿಸಿ, ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದರು.
ದೇಶದಲ್ಲಿ ಭಯೋತ್ಪಾದಕ ಕೃತ್ಯಗಳು ನಿಲ್ಲಬೇಕು ಮತ್ತು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು. ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಕಿತ್ತೊಗೆಯುವ ಕೇಂದ್ರ ಸರ್ಕಾರದ ಕಾರ್ಯಕ್ಕೆ ನಮ್ಮ ಸರ್ಕಾರವು ಬೆಂಬಲವಾಗಿ ನಿಲ್ಲಲಿದೆ.ಭಯೋತ್ಪಾದಕರ ಈ ಹೇಯ ಕೃತ್ಯವನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸೋಣ. ಮೃತರ ಕುಟುಂಬಗಳ ಜೊತೆ ನಿಲ್ಲೋಣ ಎಂದಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
— Siddaramaiah (@siddaramaiah) April 24, 2025
ಭಯೋತ್ಪಾದಕ ದಾಳಿಯಂತಹ ಹೀನ ಕೃತ್ಯದಲ್ಲಿ ಅಮಾಯಕ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಈ ದಾಳಿಯಲ್ಲಿ… pic.twitter.com/GdrMnCwlXZ