HomeLatest NewsBREAKING : ನಟ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ...

BREAKING : ನಟ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ CM ಸಿದ್ದರಾಮಯ್ಯ ಸೂಚನೆ

ಬೆಂಗಳೂರು :  ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ.

ಹೌದು.  ಕನ್ನಡ ಚಿತ್ರರಂಗದ ಇತ್ತೀಚಿನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಲ್ಯಾಂಡ್ ಲಾರ್ಡ್’ ಚಿತ್ರದ ಕಥಾವಸ್ತು ಮತ್ತು ಅದು ಸಮಾಜಕ್ಕೆ ನೀಡುತ್ತಿರುವ ಸಂದೇಶವನ್ನು ಪರಿಗಣಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಚಿತ್ರಕ್ಕೆ ರಾಜ್ಯ ಜಿಎಸ್‌ಟಿ (SGST) ಇಂದ ವಿನಾಯಿತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಟ ದುನಿಯಾ ವಿಜಯ್ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಚಿತ್ರವು ಭೂ ಸುಧಾರಣೆ, ರೈತರ ಹೋರಾಟ ಅಥವಾ ಗ್ರಾಮೀಣ ಭಾಗದ ಪ್ರಮುಖ ಸಾಮಾಜಿಕ ಸಮಸ್ಯೆಗಳನ್ನು ಆಧರಿಸಿದೆ ಎಂದು ಹೇಳಲಾಗುತ್ತಿದೆ. ಇಂತಹ ಗಂಭೀರ ವಿಷಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ತೆರಿಗೆ ವಿನಾಯಿತಿ ಸಿಗುವುದರಿಂದ ಚಿತ್ರಮಂದಿರಗಳಲ್ಲಿ ಟಿಕೆಟ್ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಕೂಡ ಇದೆ. ಅಲ್ಲದೇ  ಕಡಿಮೆ ದರದಲ್ಲಿ ಸಿನಿಮಾ ನೋಡಲು ಅವಕಾಶ ಸಿಗುವುದರಿಂದ ಹೆಚ್ಚಿನ ಜನರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆಯಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular