HomeLatest Newsಸಿಎಂ ಸಿದ್ದರಾಮಯ್ಯ ಅವಹೇಳನ: ಮತ್ತೊಬ್ಬ ವಾರ್ಡರ್ ಅರೆಸ್ಟ್

ಸಿಎಂ ಸಿದ್ದರಾಮಯ್ಯ ಅವಹೇಳನ: ಮತ್ತೊಬ್ಬ ವಾರ್ಡರ್ ಅರೆಸ್ಟ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನ ಮಾಡಿದ ಕಾರಾಗೃಹ ಸಿಬ್ಬಂದಿ ಜೈಲು ಪಾಲಾಗಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್ ಎಸ್.ಬಿ. ಪುನೀತ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತೊಣಚಿಕೊಪ್ಪಲು ನಿವಾಸಿ ಎಸ್. ಪವನ್ ನೀಡಿದ ದೂರಿನ ಮೇರೆಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಬಗ್ಗೆ ವಾರ್ಡರ್ ಮಧುಕುಮಾರ್ ಲಘುವಾಗಿ ಮಾತನಾಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರಾಗೃಹದ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಇದನ್ನು ಪವನ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರು. ಮೇ 7ರಂದು ಪವನ್ ಅವರಿಗೆ ಕರೆ ಮಾಡಿದ ಪುನೀತ್ ಧಮ್ಕಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಬಗ್ಗೆ  ಮಧುಕುಮಾರ್ ಮಾತನಾಡಿರುವುದು ಸರಿ ಇದೆ. ನೀವು ಏಕೆ ಪ್ರತಿಭಟನೆ ಮಾಡಿದ್ದೀರಿ ಎಂದು ಧಮ್ಕಿ ಹಾಕಿದ್ದು, ಈ ಬಗ್ಗೆ ಪವನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುನೀತ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular