
ಸರ್ವಪಕ್ಷಗಳ ಸಭೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಿದ್ದಾರೆ.
ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಆಲೋಚನೆ ಸರ್ಕಾರಕ್ಕೂ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

