HomeKarnatakaBIG NEWS : ನಾಳಿನ 'ಚಲೋ ದಿಲ್ಲಿ'ಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

BIG NEWS : ನಾಳಿನ ‘ಚಲೋ ದಿಲ್ಲಿ’ಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ಬೆಂಗಳೂರು : ನಾಳಿನ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡರು, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಲ್ಹಾದ್ ಜೋಷಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಸದಾನಂದ ಗೌಡ ಅವರು ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ.

ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕುಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದು ಸಿಎಂ ಪೋಸ್ಟ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular