BIG NEWS : ‘ಪುತ್ರನ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ’ : ಚುನಾವಣಾ ಆಯೋಗಕ್ಕೆ ದೂರು ಕೊಡಲು ಬಿಜೆಪಿ ಸಜ್ಜು

ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು,  ಯತೀಂದ್ರ ಸಿದ್ದರಾಮಯ್ಯ ವಿರುದ್ಧ  ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲು ಸಜ್ಜಾಗಿದೆ.

2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಇದೀಗ ಭಾರೀ ವೈರಲ್ ಆಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಅಸ್ತ್ರವನ್ನಾಗಿಸಿಕೊಂಡ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಜ್ಜಾಗಿದೆ.ಇದಕ್ಕಾಗಿ ದಾಖಲೆಗಳನ್ನು ಕೂಡಲು ಬಿಜೆಪಿ ಸಿದ್ದಪಡಿಸಿದೆ ಎನ್ನಲಾಗಿದೆ.

ನಂಜನಗೂಡಿನಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದರು. 2023 ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ.

ಟ್ವೀಟ್ ನಲ್ಲಿ ಕುಟುಕಿದ ಬಿಜೆಪಿ

ಚುನಾವಣೆ ಗೆಲುವಿಗೆ ವಾಮಮಾರ್ಗವೇ ರಾಜಮಾರ್ಗವೆಂದು ಭಾವಿಸಿರುವ ಸಿದ್ದರಾಮಯ್ಯ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರು ಜನರಿಗೆ ಸುಳ್ಳು ಅಮಿಷಗಳನ್ನು ನೀಡಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆಗಳ ಆಸೆ ಹುಟ್ಟಿಸಿ ಅಕ್ರಮವಾಗಿ ಮತಗಳನ್ನು ಗಿಟ್ಟಿಸಿಕೊಂಡಿದ್ದಾರೆ. ತರೀಕೆರೆ ಟಿಕೆಟ್ ಅಕಾಂಕ್ಷಿಯಾಗಿದ್ದ ಗೋಪಿಕೃಷ್ಣ ಅವರೇ ಹೇಳಿರುವಂತೆ ಅವರಿಂದ ₹2 ಕೋಟಿ ಪೀಕಿದ್ದು ಇದೇ ರೀತಿ ಮತದಾರರಿಗೆ ಆಮಿಷ ಒಡ್ಡುವುದಕ್ಕಾಗಿಯೇ ಇರಬಹುದು. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಅನೈತಿಕ-ಅಕ್ರಮ ಚಟುವಟಿಕೆಗೆ ಅಪ್ಪ-ಮಗ ಇಳಿದಿರುವ ಕಾರಣದಿಂದಲೇ ಗೆಲುವು ಲಭಿಸುತ್ತಿದೆ. ಚುನಾವಣೆಯ ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಸಿದ್ದರಾಮಯ್ಯ ಅವರು ಗೆದ್ದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಅನರ್ಹತೆಯೊಂದೇ ಮುಂದಿರುವ ದಾರಿ ಎಂದು ಬಿಜೆಪಿ ಕುಟುಕಿದೆ.

https://twitter.com/BJP4Karnataka/status/1704402737192911034

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read