‘ಮುಡಾ ಹಗರಣ’ ದಲ್ಲಿ ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿ ಬಿದ್ದಿದೆ ; ಬಿ.ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡಿದ್ದಾರೆ. ಈ ಅವ್ಯವಹಾರದಲ್ಲಿ ಮುಖ್ಯಮಂತ್ರಿಗಳ ಮುಖವಾಡ ಕಳಚಿ ಬಿದ್ದಿದೆ. ಬೆಲೆಬಾಳುವ ಭೂಮಿ ಕಬಳಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡು, ನಿಯಮ ಗಾಳಿಗೆ ತೂರಿ ಅಕ್ರಮ ಎಸಗಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಬೇಕು ಮತ್ತು ಹೊಣೆಗಾರಿಕೆ ಹೊತ್ತುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ನ್ಯಾಯ ಪ್ರತಿಪಾದಿಸುವ ಸಿಎಂ ಸಿದ್ದರಾಮಯ್ಯನವರು ಹಾಗೂ ಸಚಿವರುಗಳ ಬಣ್ಣ ಮುಡಾ ಹಗರಣದ ಮೂಲಕ ಬಯಲಾಗಿದೆ. ವಾಲ್ಮೀಕಿ ನಿಗಮದ ಬಹುಕೋಟಿ ಅವ್ಯವಹಾರ ರಾಜ್ಯದ ಇತಿಹಾಸದಲ್ಲೇ ಕಂಡು ಕೇಳರಿಯದ ಭ್ರಷ್ಟಾಚಾರವಾಗಿದೆ. ದಲಿತರ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಿಕೊಂಡಿರುವುದು ಜಗಜ್ಜಾಹೀರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

https://twitter.com/BJP4Karnataka/status/1810949063195414943

https://twitter.com/BJP4Karnataka/status/1810933582753366399

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read