BREAKING : ಮಂಡ್ಯದ ಮದ್ದೂರಿನಲ್ಲಿ 1,146 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ CM ಸಿದ್ದರಾಮಯ್ಯ ಶಂಕುಸ್ಥಾಪನೆ.!

ಮಂಡ್ಯದ : ಮಂಡ್ಯದ ಮದ್ದೂರಿನಲ್ಲಿ 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

ಇಂದು ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್ ಹಾಗೂ ಶಾಸಕ ಉದಯ್ ಉಪಸ್ಥಿತರಿದ್ದರು.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ. ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ನಮ್ಮ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶಾಸಕ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ. ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read