ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಲಿದ್ದಾರೆ.
ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಕಬ್ಬು ಬೆಳೆಗಾರರು ಹಾಗೂ ರೈತರ ಸಮಸ್ಯೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಲಿದ್ದಾರೆ.
ಹಾಗೂ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ರಾಹುಲ್ ಗಾಂಧಿ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಿದ್ದಾರೆ.ಸಿಎಂಗೆ ಸಚಿವ ಹೆಚ್.ಸಿ.ಮಹದೇವಪ್ಪ, ಅಶೋಕ್ ಪಟ್ಟಣ್, ಎ.ಎಸ್.ಪೊನ್ನಣ್ಣ ಸೇರಿದಂತೆ ನಾಯಕರು ಸಾಥ್ ನೀಡಿದ್ದಾರೆ.
