ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪೊಲೀಸ್ ಇಲಾಖೆಗೆ ‘CM ಸಿದ್ದರಾಮಯ್ಯ’ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮಹತ್ವದ ಘೋಷಣೆ

• ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ
• ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ
• ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ ₹ 1,000 ದಿಂದ ₹1,500ಕ್ಕೆ ಹೆಚ್ಚಿಸಲಾಗುವುದು

• CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ
• ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು
• ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ

https://twitter.com/CMofKarnataka/status/1747216150478626827

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read