BIG NEWS: NEP ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ ಸಿದ್ದುಪಡಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಎನ್‌ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ರಚಿಸಲಾದ ಸಮಿತಿಯ ರೂಪುರೇಷೆಗಳನ್ನು ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಸಮಿತಿಯ ರಚನೆಯ ರೂಪುರೇಷೆ, ಸಂಭವನೀಯ ಅಧ್ಯಕ್ಷರು, ಸದಸ್ಯರ ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸಿಕೊಡಲು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಈ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವಸರವಾಗಿ ಜಾರಿಗೊಳಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿ -2020 ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ಚುನಾವಣಾ ಸಂದರ್ಭದಲ್ಲಿ ಜನರಿಗೆ ಭರವಸೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ನೀತಿ ರಚನೆಗೆ ಸಮಿತಿ ರಚಿಸಲು ಅಗತ್ಯ ರೂಪುರೇಷೆ ಸಂಭವನೀಯ ಅಧ್ಯಕ್ಷರು, ಸದಸ್ಯರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯಿಂದ ಸಿದ್ಧಪಡಿಸಿ ಸಿಎಂ ಆವಾಗನೆಗೆ ಸಲ್ಲಿಸಲಾಗಿದೆ.

ಇದನ್ನು ಅಂತಿಮಗೊಳಿಸಿದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವರು ಮುಖ್ಯಮಂತ್ರಿಗಳಿಗೆ ಕೋರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಒಂದೆರಡು ದಿನದಲ್ಲಿ ರಾಜ್ಯ ಶಿಕ್ಷಣ ನೀತಿ ಜಾರಿ ಸಂಬಂಧ ಇಲಾಖೆ ಮಟ್ಟದಲ್ಲಿ ಸಿದ್ಧಪಡಿಸಿದ್ದ ರೂಪುರೇಷೆ ಪರಿಶೀಲಿಸಿ ಅಂತಿಮಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read