HomeKarnatakaBIG NEWS: ರಾಹುಲ್ ಗಾಂಧಿ ಭೇಟಿ ವೇಳೆ ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ

BIG NEWS: ರಾಹುಲ್ ಗಾಂಧಿ ಭೇಟಿ ವೇಳೆ ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದು, ಉಭಯ ನಾಯಕರು ಪ್ರತ್ಯೇಕವಾಗಿ 10 ನಿಮಿಷ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಮತ್ತು ಸಿಎಂ ಬದಲಾವಣೆ ಬಗ್ಗೆ ಚರ್ಚೆ ಸೇರಿ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆದಿದೆ.

ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹಾದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular