HomeKarnatakaಕುಡಿಯುವ ನೀರು, ಮೇವು ಸೇರಿ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಕುಡಿಯುವ ನೀರು, ಮೇವು ಸೇರಿ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಸ್ಥಿತಿ, ಕುಡಿಯುವ ನೀರಿನ ತೊಂದರೆ, ಜಾನುವಾರುಗಳಿಗೆ ಮೇವು ಸೇರಿ ಹಲವು ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಜಿಲ್ಲೆಗಳ ಕುಡಿಯುವ ನೀರು, ಬರ ನಿರ್ವಹಣೆ ಜಾನುವಾರುಗಳಿಗೆ ಮೇವು, ಉದ್ಯೋಗ, ಕೃಷಿ ಸಂಬಂಧಿತ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಸೂಚನೆ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೇ ಬರ ಪರಿಸ್ಥಿತಿ ಅವಲೋಕಿಸಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular