ಬಿತ್ತನೆಗೆ ಅಗತ್ಯ ಬೀಜ, ಗೊಬ್ಬರ ಒದಗಿಸಿ: ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಮೊದಲ ಸಭೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ‘ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.’

ಹೀಗೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದು ತಿಳಿಸಿದ್ದಾರೆ.

ಮಳೆ ಬಂದು ಮರಗಳು ಬಿದ್ದುಹೋದರೆ ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ 0ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು ಕಾರಣ ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read