ಬೆಂಗಳೂರು : ದೆಹಲಿಗೆ ತೆರಳಿರುವ ರಾಜ್ಯದ ಸಿಎಂ ಸಿದ್ದರಾಮಯ್ಯ ಇಂದು ರಾಷ್ಟ್ರಪತಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕರ್ನಾಟಕ ಭವನದಿಂದ ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

