HomeKarnatakaಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲು ಸಂಗ್ರಹ

ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲು ಸಂಗ್ರಹ

ಬೆಂಗಳೂರು: ಕೆ.ಎಂ.ಎಫ್‌. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ 1 ಕೋಟಿ ಲೀಟರ್‌ ದಾಟಿದೆ.

ಜೂನ್‌ 28 ರಂದು ರಾಜ್ಯದಲ್ಲಿ ಒಂದು ಕೋಟಿ ರೂ.ಗೂ ಅಧಿಕ ಹಾಲು ಸಂಗ್ರಹವಾಗಿದೆ. ರಾಜ್ಯ ಸರ್ಕಾರ ಹೈನುಗಾರಿಕೆಯ ರೈತರಿಗೆ ನೀಡಿದ ಪ್ರೋತ್ಸಾಹವೇ ಇದಕ್ಕೆ ಕಾರಣ. ರೈತರ ಬದುಕಿಗೆ ಆರ್ಥಿಕ ಚೈತನ್ಯ ತುಂಬುವುದೇ ಸರ್ಕಾರದ ಆದ್ಯತೆ ಎಂದು ಹೇಳಲಾಗಿದೆ.

“ನಮ್ಮ‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈನುಗಾರರಿಂದ ಖರೀದಿಸುವ ಹಾಲಿಗೆ 3 ರೂ. ಹೆಚ್ಚಳ ನೀಡುತ್ತಿರುವುದು, ಉತ್ತಮ ಮುಂಗಾರಿನಿಂದಾಗಿ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿರುವುದು. ಈ ಎಲ್ಲಾ ಕಾರಣದಿಂದಾಗಿ ಕಳೆದ ವರ್ಷ ನಿತ್ಯ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವ ಕೆಎಂಎಫ್ ಸಂಸ್ಥೆಯನ್ನು ಹಿಂದಿನ ಬಿಜೆಪಿ ಸರ್ಕಾರ ನಷ್ಟದ ಹಾದಿಗೆ ತಳ್ಳಿ ಗುಜರಾತ್‌ನ ಅಮುಲ್ ಜೊತೆ ವಿಲೀನ ಮಾಡುವ ಕುತಂತ್ರ ನಡೆಸಿತ್ತೋ, ಕನ್ನಡಿಗ ರೈತರು ದಶಕಗಳ ಕಾಲ ಶ್ರಮದಿಂದ ಕಟ್ಟಿದ ಸಂಸ್ಥೆಯನ್ನು ಯಾರದೋ ಮರ್ಜಿಗೆ ಒಳಗಾಗಿ ವಿಲೀನದ ಹೆಸರಲ್ಲಿ ಮುಳುಗಿಸಲು ಹೊರಟಿತ್ತೋ, ಅದೇ ಕೆಎಂಎಫ್ ಇಂದು ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ, ಇತಿಹಾಸದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಈ ಶ್ರೇಯ ನಾಡಿನ ಪ್ರತಿಯೊಬ್ಬ ಶ್ರಮಜೀವಿ ಹೈನುಗಾರನಿಗೂ ಸಲ್ಲಬೇಕು” ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular