HomeBusinessBIG BREAKING: ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್: ಆ. 1ರಿಂದ ನಂದಿನಿ ಹಾಲಿನ...

BIG BREAKING: ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್: ಆ. 1ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಂಎಫ್ ನಂದಿನಿ ಹಾಲಿನ ದರ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ಜಗದೀಶ್, ನಿರ್ದೇಶಕರಾದ ಹೆಚ್.ಡಿ. ರೇವಣ್ಣ, ಮಾಲೂರು ಶಾಸಕ ನಂಜೇಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪಶು ಸಂಗೋಪನ ಇಲಾಖೆ ಕಾರ್ಯದರ್ಶಿ ಸಲ್ಮಾ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.

ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ 5 ರೂಪಾಯಿ ಬದಲಿಗೆ 3 ರೂ. ಹೆಚ್ಚಳಕ್ಕೆ ಸರ್ಕಾರ ಸಮ್ಮತಿ ನೀಡಿದೆ. ಹಾಲು ಒಕ್ಕೂಟದ ನಷ್ಟ ಸರಿದೂಗಿಸಲು ದರ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular