HomeKarnatakaಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್

ಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಎನ್‌ಪಿಎಸ್ ನೌಕರರ ಸಂಘಟನೆಯ ಮುಖಂಡರು ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ಕುರಿತಾಗಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಎನ್‌ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ಜಾರಿಗೊಳಿಸುವ ಬಗ್ಗೆ ಎನ್‌ಪಿಎಸ್ ನೌಕರರ ಸಂಘಟನೆ, ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ಪದಾಧಿಕಾರಿಗಳು ಹಾಗೂ ಸಚಿವಾಲಯದ ನೌಕರರ ಪದಾಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್‌ಪಿಎಸ್ ರದ್ದತಿಯ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಿದ್ದು, ಒಪಿಎಸ್ ಜಾರಿ ಮಾಡುವ ಬಗ್ಗೆ ಶೀಘ್ರದಲ್ಲಿಯೇ ಬೃಹತ್ ಸಮಾವೇಶ ಆಯೋಜಿಸುವಂತೆ ಸಿಎಂ ತಿಳಿಸಿದ್ದು, ಸಮಾವೇಶದಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವ ಬಗ್ಗೆ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಸರ್ಕಾರಿ ನೌಕರರಿಗೆ ನೀಡಿರುವ ಭರವಸೆಯಂತೆ ಎನ್‌ಪಿಎಸ್ ರದ್ದತಿ ಭರವಸೆಯನ್ನು ಈಡೇರಿಸುವುದಾಗಿ ಸಿಎಂ ತಿಳಿಸಿದ್ದು, ನೌಕರರ ಮನವಿ ಆಲಿಸಿ ಹಳೆ ಪಿಂಚಣಿ ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಭೆಯಲ್ಲಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜಾ, ಕಾರ್ಯದರ್ಶಿ ನಾಗಭೂಷಣ್, ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ಶಿವರುದ್ರಯ್ಯ ಹಾಗೂ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular