ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿದರು.
ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಿಸಿ, ಬಳಿಕ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿದರು.
ಶಿಕ್ಷಣ ಇಲ್ಲದಿದ್ದರೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಿಲ್ಲ : ಸಿಎಂ
ರಾಜಕೀಯವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಮಾನತೆಯಿರಬೇಕು. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಒತ್ತಿ ಹೇಳಿದ್ದರು. ಅದರಲ್ಲಿ ನಮಗೆ ನಂಬಿಕೆ ಇದೆ. ನಮ್ಮ ಸಂವಿಧಾನ ಹೇಳಿರುವುದೇ ಅದು. ಸಂವಿಧಾನದ ಧ್ಯೇಯೋದ್ದೇಶಗಳನ್ನು, ಆಶಯಗಳನ್ನು ಜಾರಿ ಮಾಡುತ್ತೇವೆಯೇ ಹೊರತು ಯಾರನ್ನೂ ಓಲೈಸುವ ಕೆಲಸ ಮಾಡೋಲ್ಲ. ನಮಗೆ ಎಲ್ಲರೂ ಒಂದೇ. ನ್ಯಾಯಯುತವಾಗಿ ಸಿಗಬೇಕಾದ. ಹಕ್ಕುಗಳನ್ನು ದೊರಕಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಯಾರೂ ಏನೇ ಹೇಳಿದರೂ ಅದಕ್ಕೆ ನಾವು ಸೊಪ್ಪು ಹಾಕುವವರಲ್ಲ. ನಮಗೆ ಸಂವಿಧಾನ ಮುಖ್ಯ. ಅದರ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುತ್ತೇವೆ. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಮೇ 16 ರಂದು ಶಂಕುಸ್ಥಾಪನೆ ಮಾಡಲಾಗುವುದು. ಜಮೀರ್ ಅಹ್ಮದ್ ಖಾನ್ ಅವರು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಹಜ್ ಭವನಕ್ಕೆ ಬರುವ ಪ್ರವಾಸಿಗರು ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲು ಈ ಬಾರಿ 10 ಕೋಟಿ ಅನುದಾನ ನೀಡಲಾಗಿದೆ. ಮುಸಲ್ಮಾನರಲ್ಲಿ ಶಿಕ್ಷಣದ ಮಟ್ಟ ಹೆಚ್ಚಾಗಬೇಕು. ಸಾಚಾರ್ ಸಮಿತಿ ವರದಿಯಲ್ಲಿ ಶಿಕ್ಷಣದ ಪ್ರಮಾಣ ಬಹಳ ಕಡಿಮೆ ಇದೆ ಎಂದು ತಿಳಿಸಲಾಗಿದೆ. ಶಿಕ್ಷಣ ಇಲ್ಲದಿದ್ದರೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು. ನಾವು ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲರಿಗೂ ರಕ್ಷಣೆ ಕೊಡುವುದು ನಮ ಕರ್ತವ್ಯ. ಕರ್ನಾಟಕದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರೂ ಒಂದು ತಾಯಿಯ ಮಕ್ಕಳಂತೆ ಬದುಕೋಣ ಎಂದು ಹಜ್ ಗೆ ತೆರಳುವವರು ಪ್ರಾರ್ಥನೆ ಮಾಡಿ, ಅಂತಹಾ ವಾತಾವರಣ ನಿರ್ಮಿಸೋಣ ಎಂದರು.